ನವದೆಹಲಿ: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕೇಂದ್ರ ಕಚೇರಿಯಲ್ಲಿ ನೂತನವಾಗಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ಈ ವೇಳೆ ಸೋನಿಯಾ ಗಾಂಧಿ ಅವರು ಚುನಾವಣಾ ಪ್ರಮಾಣಪತ್ರವನ್ನು ಹಸ್ತಾಂತರಿಸಿದ್ದಾರೆ. 24 ವರ್ಷಗಳ ನಂತ್ರ ಮೊದಲ ಬಾರಿಗೆ ಗಾಂಧಿಯೇತರರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಅಧಿಕಾರ ವಹಿಸಿಕೊಳ್ಳುವ ಮುನ್ನ ಖರ್ಗೆ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ಭೇಟಿ ಮಾಡಿ ನೀಡಿದ್ದರು.
Paid my humble tributes to Bapu, Nehru Ji, Shastri Ji, Babu Ji, Indira Ji and Rajiv Ji before taking charge as the @INCIndia President today.
We must always remember their vision of a sovereign secular democratic republic and devote our lives to realise the India of their dreams pic.twitter.com/TIicE24hkL
— Mallikarjun Kharge (@kharge) October 26, 2022
ನಂತರ ಇಂದು ಬೆಳಗ್ಗೆ ಖರ್ಗೆ ಅವರು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದರು ಮತ್ತು ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಸ್ಮಾರಕಗಳಿಗೂ ಭೇಟಿ ನೀಡಿ ನಮನ ಸಲ್ಲಿಸಿದರು.